ಮನೆ ಬಿಟ್ಟು ಬಂದಿದ್ದ 15 ವರ್ಷದ ಬಾಲಕಿಯ ಸಾಮೂಹಿಕ‌ ಅತ್ಯಾಚಾರ



ಜೈಪುರ: ಜೋಧಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ  ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರಕರಣದ ಸಂಬಂಧ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೂ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.


ಬಾಲಕಿಯು ಭಾನುವಾರ (ಅಗಸ್ಟ್ 25) ಮಹಾತ್ಮ ಗಾಂಧಿ ಆಸ್ಪತ್ರೆ ಆವರಣದಲ್ಲಿ ಒಬ್ಬಳೇ ಓಡಾಡುತ್ತಿದ್ದ ಸಂದರ್ಭದಲ್ಲಿ ಆಕೆಯೊಂದಿಗೆ ದುಷ್ಕರ್ಮಿಗಳು ಆರಂಭಿಸಿದ್ದಾರೆ. ಬಳಿಕ ಆಸ್ಪತ್ರೆ ತ್ಯಾಜ್ಯ ಬಿಸಾಡುವ ಜಾಗಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದರು.


ಕುಟುಂಬಸ್ಥರೊಂದಿಗೆ ಕೋಪದಿಂದ  ಬಾಲಕಿ ಭಾನುವಾರ ಸಂಜೆ ಮನೆ ಬಿಟ್ಟು ಬಂದಿದ್ದಳು. ಬಳಿಕ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದರು.


ಸೋಮವಾರ ಆಸ್ಪತ್ರೆ ಆವರಣದಲ್ಲಿ ಬಾಲಕಿ ಪತ್ತೆಯಾಗಿದ್ದಳು. ಆಕೆಯ ಬಟ್ಟೆ ಹರಿದಿತ್ತು, ತಲೆಗೂದಲು ಹರಡಿತ್ತು, ನಂತರ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ, ಅತ್ಯಾಚಾರ ನಡೆದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಳು. ಈ ಸಂಬಂಧ ಇಬ್ಬರು ಯುವಕರ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ' ಎಂದು ಮಾಹಿತಿ ನೀಡಿದರು.

BREAKING NEWS
Loading latest news...
Join our WhatsApp Channel Powered By : Online Pudu