ಕೆ-ಸೆಟ್‌ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಸೆ.2ರವರೆಗೆ ಅವಕಾಶ
Friday, August 30, 2024
ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(ಕೆ-ಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಶುಲ್ಕ ಪಾವತಿಗೆ ಸೆ.3 ಕೊನೆಯ ದಿನ. ಈಗಾಗಲೇ ಎರಡು ಬಾರಿ ದಿನಾಂಕ ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ವಿಸ್ತರಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.