ಕಾರ್ಕಳ: 21 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ


ಉಡುಪಿ: ಇನ್​ಸ್ಟಾಗ್ರಾಮನಲ್ಲಿ ಪರಿಚಯವಾದ ಯುವಕನೋರ್ವ 21 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಬಗ್ಗೆ  ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗಿದೆ. ಆರೋಪಿ ಅಲ್ತಾಫ್​ನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಕುಮಾರ್ ಮಾತನಾಡಿ, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ 3 ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಇವರು ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಯುವತಿ ಬಂದಾಗ ಅಲ್ಲಿಂದ ಅಪಹರಿಸಿದ್ದನು. ಬಳಿಕ ಮಾರ್ಗ ಮಧ್ಯದಲ್ಲಿ ದ್ರವ ರೂಪದ ವಸ್ತುವಿನಲ್ಲಿ ಅಮಲು ಪದಾರ್ಥ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಲ್ತಾಫ್​ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ KMCಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.

BREAKING NEWS
Loading latest news...
Join our WhatsApp Channel Powered By : Online Pudu