ಅಮರಾವತಿ: ಶೌಚಾಲಯದಲ್ಲಿ ಗೌಪ್ಯ ಕ್ಯಾಮೆರಾ ಇರಿಸಿ, ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಅಶ್ಲೀಲ ದೃಶ್ಯಗಳನ್ನು ಸೆರೆ ಹಿಡಿದಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.
ಜಿಲ್ಲೆಯ ಗುಡ್ಡವಲ್ಲೇರು ಕಾಲೇಜಿನಲ್ಲಿ ನಡೆದ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ನೂರಾರು ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಈ ಮಧ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ. ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಸಚಿವರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಪೊಲೀಸರು ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿ ಯೊಬ್ಬನನ್ನು ಬಂಧಿಸಿದ್ದಾರೆ. ಈತ ಅಶ್ಲೀಲ ವಿಡಿಯೊಗಳನ್ನು ಇತರೆ ವಿದ್ಯಾರ್ಥಿಗಳಿಗೆ ಮಾರಿಕೊಂಡಿದ್ದ ಎನ್ನಲಾಗಿದೆ.