EMUNGARU @ SINCE 2017
BREAKING
[ಹೋಮ್] ಕರಾವಳಿ
[ಹೋಮ್] ರಾಜ್ಯ
[ಹೋಮ್] ಗ್ಲಾಮರ್
[ಹೋಮ್] ಕ್ರೈಂ
[ಹೋಮ್] ವಿಶೇಷ
[ಹೋಮ್] ದೇಶ ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ತಂತ್ರಜ್ಞಾನ
coastal

Mangalore: ತಂದೆಯಿಂದ ಮಗಳ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.


ಪ್ರೌಢಶಾಲೆಯಲ್ಲಿ ಓದುತ್ತಿರುವ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಗುರುವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

📢 ಇ ಮುಂಗಾರು WhatsApp ಚಾನೆಲ್ — ತಕ್ಷಣದ ಬ್ರೇಕಿಂಗ್ ನ್ಯೂಸ್!