ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾಗೆ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ


ಮಂಗಳೂರು: ದೆಹಲಿಯ ಕೆಂಪುಕೋಟೆಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರನ್ನು ಆಹ್ವಾನಿಸಲಾಗಿದ್ದು ವಿಶೇಷ ಅತಿಥಿಯಾಗಿ ಅವರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಕರ್ನಾಟಕದ 6 ಪಂಚಾಯತ್‌ ಮಹಿಳಾ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ.

 

ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನಫೀಸಾ ಅವರು ಹಿಂದಿನ ಅವಧಿಯಲ್ಲಿ ಎರಡೂವರೆ ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 


ಗ್ರಾ.ಪಂ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತ್ಯಾಜ್ಯ ವಿಲೇವಾರಿ ವಾಹನವನ್ನು ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ಗಮನ ಸೆಳೆದಿದ್ದ ಅವರು ಅನೇಕ ಗೌರವಗಳನ್ನು ಸ್ವೀಕರಿಸಿದರು. ಅವರ ಆ ಸೇವೆಯನ್ನು ಗುರುತಿಸಿ ವರ್ಲ್ಡ್ ಯೂತ್‌ ಸ್ಕಿಲ್‌ ಡೇ ಅಂಗವಾಗಿ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವಿಸಿದ್ದರು.

BREAKING NEWS
Loading latest news...
Join our WhatsApp Channel Powered By : Online Pudu