-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಡಬ: ಕುಂತೂರು ಶಾಲಾ ಕಟ್ಟಡ ಕುಸಿತ‌ - ನಾಲ್ವರು ಮಕ್ಕಳಿಗೆ ಗಾಯ

ಕಡಬ: ಕುಂತೂರು ಶಾಲಾ ಕಟ್ಟಡ ಕುಸಿತ‌ - ನಾಲ್ವರು ಮಕ್ಕಳಿಗೆ ಗಾಯ


ಕಡಬ: ಜಿಸಿಬಿಯಿಂದ ಕಾಮಗಾರಿ ನಡೆಯುತ್ತಿದ್ದ ವೇಳೆ ಕುಂತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ಗೋಡೆ ಸಂಪೂರ್ಣ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಡೆದಿದೆ.

ಫಾತಿಮತ್ ಸುಹಾನ, ರಶ್ಮಿ, ದೀಕ್ಷಿತಾ, ಯಶ್ಮಿತಾ ಗಾಯಗೊಂಡ ವಿದ್ಯಾರ್ಥಿನಿಯರು.

ಗಾಯಾಳು ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಥಿಲಗೊಂಡಿರುವ ಕಟ್ಟಡದ ಬಳಿ ಜೆಸಿಬಿಯಿಂದ ಕಾಮಗಾರಿ ನಡೆಸಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಮಕ್ಕಳು ಆಟವಾಡಲು ಹೊರಗಡೆ ಹೋಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಶಾಲಾ ಕಟ್ಟಡ ಕುಸಿತಗೊಂಡ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ತಕ್ಷಣ ಸಮಗ್ರ ವರದಿಯನ್ನು ಸಲ್ಲಿಸುವಂತೆ ಕಡಬ ತಹಶೀಲ್ದಾರರು, ಕಾರ್ಯನಿರ್ವಹಣಾ ಅಧಿಕಾರಿ ಸೂಚಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸಿ ಜುಬಿನ್ ಮಹೋಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ನೆರೆದಿರುವ ಪೋಷಕರು ಹಾಗೂ  ಶಾಲೆಯ ಸಮಿತಿಯವರು ಪೋಷಕರು ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ಘಟನೆಯ ಬಗ್ಗೆ ಮುಂದೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ವಿವರಣೆ ನೀಡಲಾಯಿತು.

Ads on article

Advertise in articles 1

advertising articles 2

Advertise under the article

ಸುರ