-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
TARGET ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

TARGET ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ


ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.


ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ.

 ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.


ಘಟನೆಯ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರ ಜೊತೆಗೆ ಹುಡುಕಾಡಿದ್ದು ಶಮೀರ್ ಮತ್ತು ಆತನನ್ನು ಅಟ್ಟಾಡಿಸಿಕೊಂಡು ಹೋದ ತಂಡವೂ ಪತ್ತೆಯಾಗಿರಲಿಲ್ಲ. ಇಬ್ಬರೂ ತಪ್ಪಿಸಿಕೊಂಡು ಹೋಗಿದ್ದರು ಎಂದು ಪೊಲೀಸರು ಹುಡುಕಾಟ ನಡೆಸಿ ತೆರಳಿದ್ದರು. ಈ ಸಂದರ್ಭದಲ್ಲಿ ಕೊಲೆಯಾದ ಶಮೀರ್ ಓಡಿದ ಸ್ಥಳದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಜನರು ಜಮಾಯಿಸಿದ್ದು ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.


2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ಶಮೀರ್ ಕಡಪ್ಪರ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. 

ಪ್ರಕರಣ ಸಂಬಂಧ ಜೈಲುಪಾಲಾಗಿದ್ದ
ಪಾಂಡೇಶ್ವರ ಚಿಕಬ್ ಸ್ಟಾಲ್ ನಲ್ಲಿ ಶೂಟೌಟ್ ಸೇರಿದಂತೆ ಹಲ್ಲೆ, ದರೋಡೆ ಪ್ರಕರಣಗಳು ಸೇರಿದಂತೆ 9 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಬಿಡುಗಡೆಯಾಗಿ ಬಂದಿದ್ದ, ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ