ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

BANTWAL: ಮದುವೆಯಾದ ಎರಡೇ ದಿನದಲ್ಲಿ ಭೀಕರ ಅಪಘಾತಕ್ಕೆ ನವವಿವಾಹಿತೆ ಸಾವು, ಪತಿ ಗಂಭೀರ



ಮಂಗಳೂರು: ಮದುವೆಯಾದ ಎರಡೇ ದಿನಕ್ಕೆ ಅಪಘಾತವಾಗಿ ನವ ವಿವಾಹಿತೆ ಸಾವನ್ನಪ್ಪಿದ್ದು,ಪತಿ ಗಂಭೀರವಾಗಿ ಗಾಯಗೊಂಡ  ಘಟನೆ  ಬಂಟ್ವಾಳದ ತಲಪಾಡಿಯಲ್ಲಿ ನಡೆದಿದೆ.


 ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಅಪಘಾಕ್ಕೀಡಾಗಿ ನವವಿವಾಹಿತೆ ಸಾವನ್ನಪ್ಪಿದ್ದರೆ,  ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರ ವಿವಾಹ ಸೆ. 5 ರಂದು ನಡೆದಿತ್ತು‌


 ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ  ಮಾನಸ  ಸಾವನ್ನಪ್ಪಿದವರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

  ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

  ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿ ಯೇ ಸಾವನ್ನಪ್ಪಿದ್ದಾಳೆ.

‌ ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

  ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ವಿವಾಹ ನಡೆದಿತ್ತು.  ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಮಾವನ ಮನೆಗೆ ಹೋಗುವ ವೇಳೆ ಈ‌ ಘಟನೆ ನಡೆದಿದೆ.

  ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.

 ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.