ಸುರತ್ಕಲ್:‌ ತಡರಾತ್ರಿ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ - ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ


ಸುರತ್ಕಲ್: ನಗರದ ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೇ ಬ್ಲಾಕ್‌‌ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ತಡರಾತ್ರಿ ಕಲ್ಲು ತೂರಾಡಿ ಪರಾರಿಯಾಗಿದ್ದಾರೆ.

ರವಿವಾರ ರಾತ್ರಿ 11ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿ ಗಳಿಗೆ ಕಲ್ಲು ತೂರಾಟದಿಂದ ಹಾನಿಯಾಗಿದೆ.

ಸುರತ್ಕಲ್‌ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು  ತನಿಖೆ ನಡೆಸುತ್ತಿದ್ದಾರೆ.  ಇಂದು ಈದ್‌ಮಿಲಾದ್ ಮೆರವಣಿಗೆ ಇರುವ ಹಿನ್ನೆಲೆಯಲ್ಲಿ ಸುರತ್ಕಲ್ ಪ್ರದೇಶ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu