ಕಾಲೇಜು ವಿದ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ರಹಸ್ಯ ವಿಡಿಯೋ ಚಿತ್ರೀಕರಣ- ಓರ್ವ ವಶಕ್ಕೆ




ರಾಮನಗರ: ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ಮೊಬೈಲ್ ಅನ್ನು ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. 


ಮೈಸೂರು ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ಈ ಘಟನೆ ನಡೆದಿರುವುದು ವರದಿಯಾಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಶುಕ್ರವಾರ ಬೆಳಗ್ಗೆ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದನು. 


ಇದನ್ನು ವಿದ್ಯಾರ್ಥಿನಿಯೋರ್ವಳು ಗಮನಿಸಿದ್ದಾಳೆ. ಕೂಡಲೇ ಆಕೆ ಗಾಬರಿಯಿಂದ ಕಿರುಚಾಡಿ ಶೌಚಾಲಯದಿಂದ ಹೊರಗಡೆ ಬಂದು ಇತರೆ ಸಹಪಾಠಿಗಳಿಗೆ ಮಾಹಿತಿ ನೀಡಿದ್ದಳು. ಆಗ ವಿದ್ಯಾರ್ಥಿಗಳೆಲ್ಲ ಸೇರಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ರೆಡ್​ ಹ್ಯಾಂಡ್ ಆಗಿ ಹಿಡಿದುಕೊಂಡಿದ್ದಾರೆ.


ಅದೇ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಯೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಕಾಲೇಜಿನ ಸಿಬ್ಬಂದಿಯ ಮಾಹಿತಿ ಮೇರೆಗೆ ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು, ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಿದ್ದ ಮೊಬೈಲ್​ ಅನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬೆನ್ನಲ್ಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. 

BREAKING NEWS
Loading latest news...
Join our WhatsApp Channel Powered By : Online Pudu