-->

ವಿನೇಶ್ ಫೋಗಟ್‌ ಹರಿಯಾಣ ವಿಧಾನಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಇಂದು ನಿರ್ಧಾರ

ವಿನೇಶ್ ಫೋಗಟ್‌ ಹರಿಯಾಣ ವಿಧಾನಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಇಂದು ನಿರ್ಧಾರ


ಹೊಸದಿಲ್ಲಿ: ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ರನ್ನು ಪಕ್ಷದ ಅಭ್ಯರ್ಥಿಯಾಗಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್‌ ಮಂಗಳವಾರ ಸ್ಪಷ್ಟ ನಿರ್ಧಾರಕ್ಕೆ ಬರಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಸ್ಪಷ್ಟಪಡಿಸಿದ್ದಾರೆ. 


ಎಐಸಿಸಿ ಕೇಂದ್ರೀಯ ಚುನಾವಣಾ ಸಮಿತಿಯೊಂದಿಗೆ ಸಭೆ ನಡೆಸಿದ ಬಳಿಕ ನಿರ್ಧಾರ ಪ್ರಕಟಿಸಿರುವ ಅವರು 49 ಅಭ್ಯರ್ಥಿಗಳ ಪೈಕಿ 34 ಹೆಸರುಗಳನ್ನು ಸಮಿತಿ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿರುವ ಸಂಸದೆ ಕುಮಾರಿ ಶೆಲ್ವಾ ಮತ್ತು ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲಾ ಅವರು ಸ್ಪರ್ಧಿಸುವ ಬಗ್ಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಶೆಲ್ವಾ ಅವರ ಪುತ್ರ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಿಎಂ ಭೂಪೀಂದರ್‌ ಹೂಡಾ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಅಜಯ್‌ ಮಾಕೆನ್ ನೇತೃತ್ವದ ಪರಿಶೀಲನಾ ಸಮಿತಿ 49 ಸ್ಥಾನಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬಂದಿದ್ದು, ಇದನ್ನು ಸಿಇಸಿಗೆ ಚರ್ಚೆಗಾಗಿ ಒಯ್ಯಲಾಗಿದೆ. ಕೆಲ ರಾಜಕೀಯ ಕುಟುಂಬಗಳು ಮತ್ತು ಹಾಲಿ ಶಾಸಕರ ಸ್ಥಾನಗಳ ಬಗ್ಗೆ ಚರ್ಚೆಗಳು ಅಗತ್ಯ ಇವೆ ಎಂಬ ನಿರ್ಧಾರಕ್ಕೆ ಬರಲಾಗಿದೆ. ಬಹುತೇಕ ಎಲ್ಲ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದ್ದು, ಈಗಾಗಲೇ ಚಾಲ್ತಿಯಲ್ಲಿರುವ ಹೆಸರುಗಳು ಮತ್ತು ಕುಟುಂಬಗಳ ಬದಲು ಹೊಸ ಕಾರ್ಯಕರ್ತರನ್ನು ಕಣಕ್ಕಿಳಿಸುವಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article