-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದೀಪಾವಳಿ ಹಬ್ಬಕ್ಕೆ ಸರ್ಕಾರದಿಂದ 3 ಎಲ್‌ಪಿಜಿ ಸಿಲಿಂಡರ್ ಉಚಿತ: ಸೌಲಭ್ಯ ಪಡೆಯುವುದು ಹೇಗೆ?

ದೀಪಾವಳಿ ಹಬ್ಬಕ್ಕೆ ಸರ್ಕಾರದಿಂದ 3 ಎಲ್‌ಪಿಜಿ ಸಿಲಿಂಡರ್ ಉಚಿತ: ಸೌಲಭ್ಯ ಪಡೆಯುವುದು ಹೇಗೆ?


ವಿಶಾಖಪಟ್ಟಣ: ದೀಪಾವಳಿ ಹಬ್ಬದ ಸಂಭ್ರಮ ಇಮ್ಮಡಿಗೊಳಿಸಲು ಸರ್ಕಾರ ಉಚಿತವಾಗಿ 3 ಎಲ್‌ಪಿಜಿ ಸಿಲಿಂಡರ್ ನೀಡುತ್ತಿದೆ. ಕೇಂದ್ರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಹಲವು ರಾಜ್ಯಗಳು ಈ ಯೋಜನೆಯನ್ನು ಅರ್ಹರಿಗೆ ನೀಡುತ್ತಿದೆ. ಇದೀಗ ಆಂಧ್ರಪ್ರದೇಶ ಸರ್ಕಾರ ಈ ದೀಪಾವಳಿ ಹಬ್ಬಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುತ್ತಿದೆ.  ಈಗಾಗಲೇ ಉತ್ತರಪ್ರದೇಶ ಸರಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಆಂಧ್ರಪ್ರದೇಶ ಸರಕಾರ ದೀಪಂ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ 3 ಗ್ಯಾಸ್ ಸಿಲಿಂಡರ್ ಅನ್ನು ಉಚಿತವಾಗಿ ನೀಡುತ್ತಿದೆ.


ಯಾರಿಗೆಲ್ಲಾ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್
ಹಲವು ರಾಜ್ಯಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಎಲ್‌ಪಿಜಿ ಗ್ಯಾಸ್ ಸಂಪರ್ಕ ಪಡೆದ ಕುಟುಂಬಗಳು ಈ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಹರಾಗಿದ್ದಾರೆ. ಉಜ್ವಲ ಯೋಜನೆಯಡಿ ನೋಂದಾಯಿತ ಕುಟುಂಬಗಳಿಗೆ ಮಾತ್ರ ಈ ಉಚಿತ ಗ್ಯಾಸ್ ಸೌಲಭ್ಯ ಸಿಗಲಿದೆ. 


ಆಂಧ್ರಪ್ರದೇಶದ ಸರ್ಕಾರ ತನ್ನ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ನೀಡುತ್ತಿದೆ. ಗ್ಯಾಸ್ ಬುಕಿಂಗ್ ಮಾಡಿ ಡೆಲವರಿ ವೇಳೆ ಅಥವಾ ಮುಂಗಡವಾಗಿ ಪಾವತಿಸಬೇಕು. ಹೀಗೆ ಪಾವತಿಸಿದ ಕಟುಂಬಕ್ಕೆ 48 ಗಂಟೆಗಳೊಳಗೆ ಹಣವನ್ನು ಸರ್ಕಾರ ನೇರವಾಗಿ ಖಾತೆಗೆ ವರ್ಗಾಯಿಸುತ್ತದೆ.


ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ನೋಂದಣಿ ಮಾಡಿಕೊಂಡಿರುವ ಕುಟುಂಬಗಳು ತಮ್ಮ ಆಧಾರ್ ಕಾರ್ಡ್ ಜೊತೆ ಇ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿರಬೇಕು. ಇ ಕೆವೈಸಿ ಪೂರ್ಣಗೊಂಡಿಲ್ಲದಿದ್ದರೆ ಯೋಜನೆ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಇದುವರೆಗೆ ಮಾಡಿಕೊಂಡಿಲ್ಲದಿದ್ದರೆ, ತಕ್ಷಣವೇ ಇ ಕೆವೈಸಿ ಪೂರ್ಣಗೊಳಿಸಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೀಪಂ ಯೋಜನೆಗೆ ಚಾಲನೆ ನೀಡಿ ಮಾತನಾಡಿದ್ದಾರೆ. ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ದೀಪಾವಳಿ ಹಬ್ಬಕ್ಕೆ ಬಡ ಕುಟುಂಬಗಳು ಸಂಭ್ರಮದಿಂದ ಹಬ್ಬ ಆಚರಿಸಲು ನೆರವಾಗಲಿದೆ ಎಂದು ನಾಯ್ಡು ಹೇಳಿದ್ದಾರೆ.


ಈ ಯೋಜನೆಯಿಂದ ಆಂಧ್ರ ಪ್ರದೇಶದ ಸರ್ಕಾರದ ಬೊಕ್ಕಸಕ್ಕೆ 2,684 ಕೋಟಿ ರೂ. ಹೊರೆಯಾಗಲಿದೆ. ದೀಪಾವಳಿ ಹಬ್ಬದ ಮೂರು ದಿನಗಳ ಮೊದಲು ಉಚಿತ ಗ್ಯಾಸ್ ಸಿಲಿಂಡರ್ ಬುಕ್ ಮಾಡಿಕೊಂಡರೆ, ಹಬ್ಬದ ದಿನ ಸಿಲಿಡಂರ್ ವಿತರಣೆಯಾಗಲಿದೆ. ತ್ವರಿತ ಡೆಲಿವರಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ನಾಡೆಂದ್ಲ ಮನೋಹರ್ ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ