ದಿನೇಶ್ ಗುಂಡೂರಾವ್ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ : ಬಸವನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
Wednesday, October 16, 2024
ಬೆಂಗಳೂರು : ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ದಿನೇಶ್ ಗುಂಡೂರಾವ್ ಅವರ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಈ ಆದೇಶ ಮಾಡಿದ್ದಾರೆ.
ಯತ್ನಾಳ್‌ರಿಗೆ ಬುಧವಾರ ವಿಚಾರಣೆಗೆ ನೋಟಿಸ್ ನೀಡಿದ್ದರು. ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.