ಮನೆಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬಿದ್ದು ಆರು ವರ್ಷದ ಮಗು ಮೃತ್ಯು


ದಾವಣಗೆರೆ: ಮನೆಮುಂದೆ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್‌ನಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಟ್ರ್ಯಾಕ್ಟರ್‌ನಿಂದ ಬಿದ್ದು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ.


ದಿಶಾಗೌಡ (6) ಮೃತಪಟ್ಟ ಬಾಲಕಿ.

ಮನೆ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಮೇಲೆ ಆಟವಾಡುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾವಿಗೀಡಾಗಿದೆ. ದಾವಣಗೆರೆಯಲ್ಲಿ ನೆಲೆಸಿದ್ದ ವಕೀಲ ಸಿದ್ದನಗೌಡ ಹಾಗೂ ಸವಿತಾ ಗೌಡರ ಪುತ್ರಿ ದಿಶಾಗೌಡ ಅವರು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮೇಲೆ ಆಡುತ್ತಿದ್ದ ಆಕಸ್ಮಿಕ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ.


ಟ್ರ್ಯಾಕ್ಟರ್‌ನಿಂದ ಬಿದ್ದು ಗಾಯಗೊಂಡ ಬೆನ್ನಲ್ಲಿಯೇ ಮಗುವನ್ನು ಹರಪನಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಆದರೆ, ಹರಪನಹಳ್ಳಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ತಕ್ಷಣ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ದಾವಣಗೆರೆಯ ದೊಡ್ಡ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಪೋಷಕರ ಈ ಪ್ರಯತ್ನ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ಘಟನೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

BREAKING NEWS
Loading latest news...
Join our WhatsApp Channel Powered By : Online Pudu