ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್ - ಕೂಳೂರು ಸೇತುವೆಯಲ್ಲಿ ಕಾರು ಪತ್ತೆ, ನದಿಗೆ ಹಾರಿದ ಶಂಕೆ
Sunday, October 6, 2024
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ(52) ಅವರು ನಾಪತ್ತೆಯಾಗಿದ್ದು, ನಗರದ ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ನಸುಕಿನ ವೇಳೆ 3ಗಂಟೆ ಸುಮಾರಿಗೆ ಮುಮ್ತಾಜ್ ಆಲಿ ಮನೆಯಿಂದ ತಮ್ಮ ಬಿಎಂಡಬ್ಲ್ಯು ಕಾರಿನಲ್ಲಿ ತೆರಳಿದ್ದರು. ರವಿವಾರ ಬೆಳ್ಳಂಬೆಳಗ್ಗೆ ಬೆಳಗ್ಗೆ 5ಗಂಟೆಗೆ ಕೂಳೂರು ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಆದರೆ ಅವರು ನಾಪತ್ತೆಯಾಗಿದ್ದರು. ಅವರ ಫೋನ್ ಕೂಡಾ ಸ್ವಿಚ್ ಆಫ್ ಆಗಿತ್ತು. ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಮ್ತಾಜ್ ಅಲಿಯವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್ಎಸ್‌ಎಲ್ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಮ್ತಾಜ್ ಆಲಿಯವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.