ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ


ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್‌ ಮೇಲೆ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್‌ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕನ್ನು ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.

ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu