-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಚುನಾವಣಾ ರಣತಂತ್ರ ರೂಪಿಸಲು ಪ್ರಶಾಂತ್ ಕಿಶೋರ್ ಪಡೆಯುವ ಫೀಸ್ ಎಷ್ಟು ಗೊತ್ತೇ?

ಚುನಾವಣಾ ರಣತಂತ್ರ ರೂಪಿಸಲು ಪ್ರಶಾಂತ್ ಕಿಶೋರ್ ಪಡೆಯುವ ಫೀಸ್ ಎಷ್ಟು ಗೊತ್ತೇ?


ಬಿಹಾರ: ರಾಜಕೀಯ ಪಕ್ಷಗಳು ಅಥವಾ ರಾಜಕಾರಣಿಗಳಿಗೆ ಚುನಾವಣಾ ಕಾರ್ಯತಂತ್ರ ರೂಪಿಸಲು ನಾನು ಬರೋಬ್ಬರಿ 100 ಕೋಟಿಗೂ ಅಧಿಕ ಶುಲ್ಕ ಪಡೆಯುತ್ತೇನೆಂದು ಚುನಾವಣಾ ಚಾಣಕ್ಯ ಹಾಗೂ ಜನ್ ಸೂರಜ್‌ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಹಿರಂಗಪಡಿಸಿದ್ದಾರೆ. ಅ.31ರಂದು ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿದ್ದ ವೇಳೆ ಪ್ರಶಾಂತ್ ಕಿಶೋರ್ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.


ಈ ವಿಚಾರ ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬೆಳಗಂಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಪ್ರಶಾಂತ್‌ ಕಿಶೋರ್ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನನ್ನ ಚುನಾವಣಾ ತಂತ್ರದ ಕಾರಣದಿಂದ 10ಸರ್ಕಾರಗಳು ಅಧಿಕಾರದಲ್ಲಿದೆ ಎಂದಿದ್ದಾರೆ. 

ಬೆಳಗಂಜ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಶಾಂತ್ ಕಿಶೋರ್, ಮುಸ್ಲಿಂ ಸಮುದಾಯದ ಸದಸ್ಯರನ್ನು ಒಳಗೊಂಡ ಸಭಿಕರನ್ನುದ್ದೇಶಿಸಿ ಮಾತನಾಡುತ್ತಾ, ಜನರು ತಮ್ಮ ಅಭಿಯಾನಗಳಿಗೆ ಹಣದ ಮೂಲದ ಬಗ್ಗೆ ಆಗಾಗ್ಗೆ ಪ್ರಶ್ನಿಸುತ್ತಾರೆ ಎಂದು ವಿವರಿಸಿದರು.


ತಮ್ಮ ಪ್ರಚಾರಕ್ಕೆ ಹಣವಿಲ್ಲ ಎಂದು ತಿಳ್ಕೊಂಡಿದ್ದೀರಾ? ನಾನು ದುರ್ಬಲನೆಂದು ತಿಳಿದುಕೊಳ್ಳಬೇಡಿ. ನನ್ನ ಪ್ರಚಾರಕ್ಕಾಗಿ ಟೆಂಟ್‌ಗಳು ಮತ್ತು ವೇದಿಕೆಗಳನ್ನು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಅಂದುಕೊಳ್ಳಬೇಡಿ ಎಂದಿದ್ದಾರೆ. ಬಿಹಾರದಲ್ಲಿ ನನ್ನಷ್ಟು ಶುಲ್ಕವನ್ನು ಯಾರೂ ಕೇಳಿರಲು ಸಾಧ್ಯವೇ ಇಲ್ಲ. ನಾನು  ಒಂದು ಚುನಾವಣೆಗೆ ಯಾರಿಗಾದರೂ ಪ್ಲ್ಯಾನ್‌ ಕೊಟ್ಟರೆ ಅದಕ್ಕೆ ನನ್ನ ಶುಲ್ಕ 100 ಕೋಟಿ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚು. ಮುಂದಿನ ಎರಡು ವರ್ಷಗಳವರೆಗೆ, ನಾನು ಅಂತಹ ಒಂದು ಚುನಾವಣಾ ಸಲಹೆಯೊಂದಿಗೆ ನನ್ನ ಪ್ರಚಾರವನ್ನು ಮುಂದುವರಿಸಬಹುದು ಎಂದಿದ್ದಾರೆ.


ಬೆಳಗಂಜ್ ಅಲ್ಲದೆ, ಇಮಾಮ್‌ಗಂಜ್, ರಾಮಗಢ ಮತ್ತು ತರಾರಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಆಯಾ ಶಾಸಕರು ರಾಜೀನಾಮೆ ನೀಡಿದಾಗ ಎಲ್ಲಾ ಸ್ಥಾನಗಳು ಖಾಲಿ ಬಿದ್ದವು.‌ ಶುಕ್ರವಾರದ ಪ್ರಚಾರದಲ್ಲಿ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹೊರತು ಕೇಂದ್ರವು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಕಾನೂನನ್ನು ಪರಿಚಯಿಸುವ ಮೊದಲು ಸರ್ಕಾರವು ಅದರ ಪ್ರಭಾವಕ್ಕೆ ಒಳಗಾಗುವ ಜನರ ವಿಶ್ವಾಸವನ್ನು ಪಡೆಯಬೇಕು ಎಂದು ಅವರು ಹೇಳಿದರು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article