ರಾಜ್ಯಪಾಲರ ವರ್ಗಾವರ್ಗಿ: 2 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ಮೂವರ ವರ್ಗಾವಣೆ

ರಾಜ್ಯಪಾಲರ ವರ್ಗಾವರ್ಗಿ: 2 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ಮೂವರ ವರ್ಗಾವಣೆ





ಐದು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಈ ಪೈಕಿ 2 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದರೆ, ಮೂವರು ರಾಜ್ಯಪಾಲರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಲ್ಲ ಅವರನ್ನು ಮಣಿಪುರಕ್ಕೆ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಅದೇ ರೀತಿ ನಿವೃತ್ತ ಜನರಲ್, ವಿಜಯ್ ಕುಮಾರ್ ಸಿಂಗ್ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ನೇಮಕ ಆದೇಶವನ್ನು ಹೊರಡಿಸಿದ್ದಾರೆ.


ಕೇರಳದ ವಿವಾದಾತ್ಮಕ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರೇಕರ್ ಅವರನ್ನು ಕೇರಳಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


ಡಾ. ಹರಿಬಾಬು ಕಂಬಂ ಪತಿ ಅವರನ್ನು ಒಡಿಶಾಕ್ಕೆ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ, ಒಡಿಶಾ ರಾಜ್ಯಪಾಲರಾಗಿದ್ದ ರಘುವರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ ಮಾಡಿದ್ದಾರೆ.


1984ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಲ್ಲ ಅವರು 2019ರ ಆಗಸ್ಟ್ ನಲ್ಲಿ ಗೃ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.




BREAKING NEWS
Loading latest news...
Join our WhatsApp Channel Powered By : Online Pudu