ಪುತ್ತೂರು: 'ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೋ ಅಣ್ಣ' ಎಂದು ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ ಯುವಕನೋರ್ವನು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಮಂಡೆಕೋಲು ಶಿವಾಜಿನಗರದಲ್ಲಿ ನಡೆದಿದೆ.
ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಆತ್ಯಹತ್ಯೆ ಮಾಡಿಕೊಂಡವರು.
ಪುರುಷೋತ್ತಮ್ ತಮ್ಮ ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿರುವ ಪುರುಷೋತ್ತಮ್ ತಮ್ಮ ಫೋಟೊ ಹಾಕಿ 'ಓಂ ಶಾಂತಿ' ಎಂದು ಬರೆದುಕೊಂಡಿದ್ದರು. ಅಲ್ಲದೆ 'ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೋ ಅಣ್ಣ' ಎಂದು ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪುರುಷೋತ್ತಮ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಪುರುಷೋತ್ತಮ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.