-->

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧ

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧ

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧ





ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕರ್ನಾಟಕ ಹೈಕೋರ್ಟ್‌ ನಿಬಂಧಾಜ್ಞೆ ಹೊರಡಿಸಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಬೆಂಬಲಿಗರಿಗೆ ಈ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾ. ಆರ್. ದೇವದಾಸ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.


ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ನ್ಯಾಯಪೀಠ ನಿರ್ಬಂಧಕಾಜ್ಞೆ ಹೊರಡಿಸಿದೆ.


ಮಾನ್ಯ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ , ನ್ಯಾಯಾಂಗ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್‌ ಗಂಭೀರವಾಗಿ ಪರಿಗಣಿಸಿ ಈ ಆದೇಶ ಹೊರಿಡಿಸಿದೆ.


ಬೇಷರತ್‌ ಕ್ಷಮೆ ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ ಅವರು ಅಫಿದಾವಿತ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಅವರು ಸರಿಪಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣದಲ್ಲಿ, ಸಭೆ , ಸಮಾರಂಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳು, ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ,ಕಾನೂನು ರೀತ್ಯಾ ತತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠ ಪೋಲೀಸರಿಗೆ ಸೂಚನೆ ನೀಡಿದೆ.


ಅರ್ಜಿದಾರರ ಪರ ಹೈಕೋರ್ಟ್‌ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಆರ್.‌ ರಾಜಶೇಖರ್‌ ಹಿಲಿಯಾರು ವಾದ ಮಂಡಿಸಿದರು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article