-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇನ್ನಾ :  ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ ಕ್ರಿಕೆಟ್ ಪಂದ್ಯಾಟ

ಇನ್ನಾ : ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ ಕ್ರಿಕೆಟ್ ಪಂದ್ಯಾಟ

ಶ್ರೀ ವ್ಯಾಘ್ರ ಚಾಮುಂಡೇಶ್ವರಿ ಯುವಕ ಮತ್ತು ಯುವತಿ ಮಂಡಲದ ವತಿಯಿಂದ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ಟ್ರೋಪಿ 2025  40 ಗಜಗಳ ಲೀಗ್ ಹಾಗೂ ನೌಕೌಟ್ ಮಾದರಿಯ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಎದುರುಗಡೆ ಮೈದಾನದಲ್ಲಿ ನಡೆಯಿತು.

 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಜಾ ಭಟ್  ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ  ದೈಹಿಕ ಹಾಗೂ ಮಾನಸಿಕ ಸಮತೋಲನಕ್ಕೆ ಕ್ರೀಡೆ ಬಹಳ ಮುಖ್ಯ.  ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು .

 ವೇದಿಕೆಯಲ್ಲಿ ದೇವಿ ಪ್ರಸಾದ್ ಶೆಟ್ಟಿ  ಬಗ್ಗರ ಗುತ್ತು ಗುತ್ತಿನಾರ್,  ಇನ್ನಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಶೆಟ್ಟಿ, ನಿರಂಜನ್ ಶೆಟ್ಟಿ ಮಡ್ಮಣ್ ಗುತ್ತು, ಕುಂಭನಿಧಿಗಳು ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ಅಧ್ಯಕ್ಷ ಕುಶ ಆರ್. ಮೂಲ್ಯ ,ಬೇಬಿ ಶೆಟ್ಟಿ ಸಾನದ ಮನೆ ,ವ್ಯಾಘ್ರ ಚಾಮುಂಡೇಶ್ವರಿ ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಶೆಟ್ಟಿ ಬಿಡು ಮನೆ,ಅಧ್ಯಕ್ಷ ದಿನೇಶ್ ಶೆಟ್ಟಿ ಕಾರ್ಯದರ್ಶಿ ಸುಧಾಕರ್ ಪೂಜಾರಿ ಮಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಭಯ ಜಿಲ್ಲೆಯಸುಮಾರು 24 ತಂಡಗಳುಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿದ್ದವು .

Ads on article

Advertise in articles 1

advertising articles 2

Advertise under the article

ಸುರ