
ಪೆರ್ವಾಜೆ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ
Friday, February 14, 2025
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪೆರ್ವಾಜೆ ಶಾಸ್ತಾವಿನ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಶುಕ್ರವಾರ ನಡೆಯಿತು.
ಬೆಳಿಗ್ಗೆ ಗಂಟೆ 6-15ಕ್ಕೆ ದ್ವಾರ ಪೂಜೆ, ಬೆಳಿಗ್ಗೆ ಗಂಟೆ 6-45ಕ್ಕೆ ಪ್ರಾತಃ ಪೂಜೆ ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಬಾಬಾರವರಿಗೆ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12-45ಕ್ಕೆ ಮಹಾಪೂಜೆ ನಂತರ ಅನ್ನ ಸಂತರ್ಪಣೆ, ಸಂಜೆ ಗಂಟೆ 5ಕ್ಕೆ ಸೇವಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮಗಳು ರಾತ್ರಿ ಗಂಟೆ 8 ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೆ. ಕಮಲಾಕ್ಷ ಕಾಮತ್, ಆಡಳಿತ ಮೊಕ್ತೆಸರರಾದ ಶ್ರೀಮತಿ ಲಲಿತಾ ಸುವರ್ಣ ಅಭಿಷೇಕ್ ಸುವರ್ಣ, ಪ್ರಧಾನ ಅರ್ಚಕ ಹಾಗೂ ವ್ಯವಸ್ಥಾಪಕರಾದ ಲಕ್ಷ್ಮೀನಾರಾಯಣ ಭಟ್, ಪ್ರಪುಲ್ಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.