ಕಾರ್ಕಳ: ಮಾ. ಅಥ್ಲೆಟಿಕ್ ನಲ್ಲಿ ಚಿನ್ನದ ಪದಕ ಪಡೆದ ವಿದ್ಯಾ ಶೆಟ್ಟಿಗೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾ ಶೆಟ್ಟಿ ಜೋಡು ರಸ್ತೆ ಕಾರ್ಕಳ ಅವರು ಥಾಯ್ಲೆಂಡ್‌ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಮತ್ತು ಶಾಟ್‌ಪುಟ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇವರ ಸಾಧನೆಯನ್ನು ಶ್ಲಾಘಿಸಿದ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಅಭಿನಂದನೆ ಸಲ್ಲಿಸಿದ್ದಾರೆ.