ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬೈಕ್- ಧಾರವಾಡ ಮೂಲದ ಯುವಕರಿಬ್ಬರು ಸಾವು



ಮಂಗಳೂರು: ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಧಾರವಾಡ ಮೂಲದ ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27), ನವೀನ್ ಹೂಗಾರ (26) ಮೃತಪಟ್ಟ ದುರ್ದೈವಿಗಳು.

ಮುಲ್ಕಿ ಸಮೀಪದ ಕಿನ್ನಿಗೋಳಿಯ ಬಟ್ಟಕೋಡಿ ಎಂಬಲ್ಲಿ ಸೋಮವಾರ ರಾತ್ರಿ ಈ ಅಪಘಾತ ನಡೆದಿದೆ. ಅತೀ ವೇಗವಾಗಿ ಬಂದ ಅತೀ ವೇಗವಾಗಿ ಬಂದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಆತ್ಮಾನಂದ ಅಂಬಿಗರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡ ನವೀನ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನವೀನ್ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದಿದ್ದಾರೆ. 




ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.