ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಮಂಗಳೂರು: ದೇಶ ವಿರೋಧಿ, ಹಿಂದೂ ಧರ್ಮ ವಿರೋಧಿ ಪೋಸ್ಟ್ ಹಾಕಿದ ವೈದ್ಯೆ- ಎಫ್ಐಆರ್ ದಾಖಲು, ಆಸ್ಪತ್ರೆಯಿಂದ ವಜಾ


ಮಂಗಳೂರು: ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಆಗಿರುವ ಅಫೀಫಾ ಫಾತೀಮಾ ಎಂಬಾಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ   ಹಿಂದೂ ಧರ್ಮ ಹಾಗೂ ದೇಶ ವಿರೋಧಿ ಪೋಸ್ಟ್ ಮಾಡಿದ್ದಾಳೆ.

ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟಿಷನ್ ಆಗಿರುವ ಅಫೀಫಾ ಫಾತೀಮಾ "HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ). AM I INDIAN- YES, DO I HATE INDIA - YES, (ಹೌದು  ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ)" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು.


ಈ ವಿವಾದಾತ್ಮಕ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು.‌ ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದಿತ್ತು. ಆಕ್ರೋಶ‌ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾಳನ್ನು ಸೇವೆಯಿಂದ ವಜಾಗೊಳಿಸಿದೆ.

ಹೈಲ್ಯಾಂಡ್ ಆಸ್ಪತ್ರೆಯ ಹೆಚ್ಆರ್ ಮಹಮ್ಮದ್ ಅಸ್ಲಾಂ ಅವರು ಅಫೀಫ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ನೀಡಿದ ಹಿನ್ನೆಲೆಯಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫೀಫ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ BNS ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.