ಮಂಗಳೂರು: ಮೃತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 25ಲಕ್ಷ ರೂ. ಪರಿಹಾರ ಘೋಷಿಸಿದ ಬಿ.ವೈ.ವಿಜಯೇಂದ್ರ, ಪ್ರಕರಣ ಎನ್ಐಎಯಿಂದ ತನಿಖೆಗೆ ಆಗ್ರಹ


ಮಂಗಳೂರು: ದುಷ್ಕರ್ಮಿಗಳ ದಾಳಿಗೊಳಗಾಗಿ ಕೊಲೆಯಾದ ಸುಹಾಸ್ ಶೆಟ್ಟಿ ಸಾವಿನಿಂದ ಆತನ ಕುಟುಂಬದ ಆಧಾರಸ್ತಂಭವೇ ಕಳಚಿ ಹೋಗಿದೆ. ಆದ್ದರಿಂದ ಬಿಜೆಪಿ ಪಕ್ಷದಿಂದ 25ಲಕ್ಷ ರೂ. ಪರಿಹಾರ ನೀಡುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

ರಾಜ್ಯ ಸರಕಾರ ಇಂತಹ ಘಟನೆಗಳ ಸಂದರ್ಭ ಯಾವತ್ತೂ ಹಿಂದೂ ಕಾರ್ಯಕರ್ತರ ಪರವಾಗಿ ನಿಲ್ಲುವುದಿಲ್ಲ‌. ಸರಕಾರಕ್ಕೆ ಮನುಷ್ಯತ್ವವಿದ್ದಲ್ಲಿ  ಸುಹಾಸ್ ಶೆಟ್ಟಿ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಿ. ಜೊತೆಗೆ ಪ್ರಕರಣವನ್ನು ಎನ್ಐಎಯಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ನೆನಪು ಮಾಸುವ ಮುನ್ನವೇ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಯಾಗಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಸುಹಾಸ್ ಶೆಟ್ಟಿಗೆ ಜೀವ ಬೆದರಿಕೆ ಇದ್ದರೂ ಯಾವುದೇ ರೀತಿಯ ರಕ್ಷಣೆ ಇಲ್ಲದಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.