ಮಂಗಳೂರು: ದ.ಕ.ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮೇ 27-28ರಂದು ರಜೆ



ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ  ಅತೀ ಹೆಚ್ಚಿನ ಮಳೆ ಸುರಿದಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದ ಹಿನ್ನೆಲೆಯಲ್ಲಿ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೇ 27, 28ರಂದು ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ತುರ್ತು ಕ್ರಮ ಕೈಗೊಂಡಿದೆ.

BREAKING NEWS
Loading latest news...
Join our WhatsApp Channel Powered By : Online Pudu