ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದ ಸಿಬಿಐ ವಿಶೇಷ ನ್ಯಾಯಾಲಯ- 7ವರ್ಷ ಜೈಲು ಶಿಕ್ಷೆ


ಹೈದರಾಬಾದ್: ಇಲ್ಲಿನ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪೆನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಜನಾರ್ದನ ರೆಡ್ಡಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅವರಿಗೆ 7ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯಂತೆ 2009ರಲ್ಲಿ ಸಿಬಿಐ ತನಿಖೆ ಆರಂಭಗೊಂಡಿತ್ತು. 2011 ರಲ್ಲಿ ಸಿಬಿಐ ತನ್ನ ಮೊದಲ ಚಾರ್ಜ್‌ ಶೀಟ್ ಸಲ್ಲಿಸಿತ್ತು. ಬಳಿಕ ಐಎಎಸ್‌ ಅಧಿಕಾರಿ ಶ್ರೀಲಕ್ಷ್ಮಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕಿ ಮೆಫಾಝ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ 9ಆರೋಪಿಗಳನ್ನು ಹೆಸರಿಸಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆದಿತ್ತು. ನ್ಯಾಯಾಲಯವು ಮೇ ತಿಂಗಳಿನ ಒಳಗೆ ವಿಚಾರಣೆ ಪೂರ್ಣಗೊಳಿಸಲು ಗಡುವು ವಿಧಿಸಿತ್ತು‌. ಆದ್ದರಿಂದ ಕಳೆದ ತಿಂಗಳು ವಾದವನ್ನು ಮುಕ್ತಾಯಗೊಳಿಸಲಾಗಿತ್ತು.