-->
ಮಂಗಳೂರು: ಕಾಲೇಜು ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್ಸು - ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಕಾಲೇಜು ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್ಸು - ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ನಿಂತಿದ್ದ ಕಾಲೇಜು ಬಸ್ಸೊಂದಕ್ಕೆ ಖಾಸಗಿ ಬಸ್ಸು ಹಿಂಭಾಗದಿಂದ ಡಿಕ್ಕಿಯಾದ ಪರಿಣಾಮ 10ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ. 

ಬಲ್ಮಠದಲ್ಲಿ ರಸ್ತೆಬದಿಯಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ಸೊಂದು ನಿಂತಿತ್ತು. ಈ ವೇಳೆ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ವೇಗವಾಗಿ ಬಂದು ಕಾಲೇಜು ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾಲೇಜು ಬಸ್ ಸ್ವಲ್ಪ ಮುಂದಕ್ಕೆ ತಳ್ಳಲ್ಪಟ್ಟು ನಿಂತಿದೆ.

ಪರಿಣಾಮ ಕಾಲೇಜು ಬಸ್ಸಿನಲ್ಲಿದ್ದ 10-15 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಲ್ಲದೆ ಖಾಸಗಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸದ್ಯ ಅಪಘಾತದ ವೀಡಿಯೋ ವೈರಲ್ ಆಗಿದೆ.

ಈ ಬಗ್ಗೆ ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article