ಮಂಗಳೂರು: ರಸ್ತೆ ಬದಿ ನಿಂತಿದ್ದ ಯುವಕನಿಗೆ ಚೂರಿ ಇರಿದ ದುಷ್ಕರ್ಮಿಗಳು- ಆಸ್ಪತ್ರೆಗೆ ದಾಖಲು
Friday, May 2, 2025
ಮಂಗಳೂರು: ನಗರದ ಹೊರವಲಯದ ಕಣ್ಣೂರು ಎಂಬಲ್ಲಿ ಶುಕ್ರವಾರ ಮುಂಜಾನೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ನೌಶಾದ್ ಚೂರಿ ಇರಿತಕ್ಕೊಳಗಾದವನು.
ನೌಶಾದ್ ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್‌ಗೆ ತೆರಳಲು ಮುಂಜಾನೆ 3ಗಂಟೆ ಸುಮಾರಿಗೆ ಅಡ್ಯಾರ್ ಕಣ್ಣೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದರು. ಈ ವೇಳೆ ಎರಡು ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್ ಬೆನ್ನಿಗೆ ಚೂರಿಯಿಂದ ಇರಿದ್ದಾರೆ ಎನ್ನಲಾಗಿದೆ. ತಕ್ಷಣ ನೌಶಾದ್ ಅವರು ಓಡಿ ತಪ್ಪಿಸಿಕೊಂಡಿದ್ದು, ಬಳಿಕ ಸ್ಥಳೀಯರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.