ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ- ಚಾಲಕ ವಶಕ್ಕೆ
Monday, May 5, 2025
ಉಪ್ಪಿನಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಉಪ್ಪಿನಂಗಡಿ ಬಳಿಯ ಉರುವಾಳು ಗ್ರಾ.ಪಂನ ಕುಪ್ಪೆಟ್ಟಿ ಎಂಬಲ್ಲಿ ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಜಯಂತ್ ಗೌಡನು ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.