ಮಂಗಳೂರು: ಸರ್ವೇ ಇಲಾಖೆಯ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
Thursday, May 15, 2025
ಮಂಗಳೂರು: ಸರ್ವೇ ಇಲಾಖೆಯ ಅಧಿಕಾರಿಯ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ದಾಳಿ ನಡೆದಿದೆ.
ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಇವರು ಅಪಾರ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಲೋಕಾಯುಕ್ತ ದಾಳಿ ನಡೆಸಿದೆ. ಏಕಕಾಲದಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮನೆಯಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.