-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಯುವಕನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ ಮೂರು ಮಕ್ಕಳ ತಾಯಿ: ಲವ್ವಿ ಡವ್ವಿ - ಬ್ಲ್ಯಾಕ್‌ಮೇಲ್ ಕೊಲೆಯಲ್ಲಿ ಅಂತ್ಯ

ಯುವಕನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ ಮೂರು ಮಕ್ಕಳ ತಾಯಿ: ಲವ್ವಿ ಡವ್ವಿ - ಬ್ಲ್ಯಾಕ್‌ಮೇಲ್ ಕೊಲೆಯಲ್ಲಿ ಅಂತ್ಯ



ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಮಹಿಳೆಯೊಬ್ಬರ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ದೊರಕಿದೆ. ಮಹಿಳೆಯ ಮೊಬೈಲ್ ಕಾಲ್ ಬೆನ್ನಟ್ಟಿದ ಪೊಲೀಸರು ಆಕೆಯ ಪ್ರಿಯಕರನೇ ಕೊಲೆಗೈದು ಮೃತದೇಹವನ್ನು ಎಸೆದಿದ್ದಾನೆ ಎಂದು ಪತ್ತೆ ಹಚ್ಚಿದ್ದಾರೆ.

ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಎಂಬ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ಆಕೆಯ ಮೊಬೈಲ್​​ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ತಂಡ ಚಾಣಾಕ್ಷಣದಿಂದ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಯುವಕಮೊಂದಿಗೆ ಮಹಿಳೆ ಲವ್ವಿಡವ್ವಿ ಹಾಗೂ ಕೊಲೆ ಕಹಾನಿ ಬಯಲಿಗೆ ಬಂದಿದೆ.


ಅದು 2025 ಏಪ್ರಿಲ್ 23 ರಂದು ಸೂರಣಗಿ ಗ್ರಾಮದ ದೊಡ್ಡೂರ ರಸ್ತೆಯ ಬಯಲು ಬಸವೇಶ್ವರ ದೇವಸ್ಥಾನ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಹಿಳೆ ಶವಪತ್ತೆಯಾದ ಸುದ್ದಿ ಗ್ರಾಮದಲ್ಲಿ ಹಬ್ಬುತ್ತಿದ್ದಂತೆ ಇಡೀ ಗ್ರಾಮವೇ ಬೆಚ್ಚಿಬಿದ್ದಿತ್ತು. ಗಾಬರಿಯಾದ ಸೂರಣಗಿ ಗ್ರಾಮಸ್ಥರು ತಕ್ಷಣ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ಮತ್ತು ತಂಡ ಪರಿಶೀಲನೆ ಮಾಡಿತ್ತು. ಆ ವೇಳೆ ಇದು ಸಹಜ ಸಾವಲ್ಲ ಪಕ್ಕಾ ಕೊಲೆ ಅನ್ನೋ ಅನುಮಾನ ಮೂಡಿತ್ತು.


ಬಳಿಕ ಪ್ರಕರಣ ತನಿಖೆ ಚುರುಕುಗೊಳಿಸಿದಾಗ ವಾರದ ಬಳಿಕ ಕೊಲೆಯಾದ ಮಹಿಳೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ನೇಲೊಗಲ್ ಗ್ರಾಮದ ಲಕ್ಷ್ಮೀ ಇಂಗಳಗಿ ಎಂದು ತಿಳಿದು ಬಂದಿದೆ. ಆಗ ಮೃತಳ ಸಹೋದರಿ ಸಾವಿನಲ್ಲಿ ಅನುಮಾನವಿದೆ ಎಂದು ದೂರು ನೀಡಿದ್ದಾಳೆ. ಈ ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ ಅದೊಂದು ಫೋನ್​​ನ ಒಂದು ಸಣ್ಣ ಸುಳಿವು ಸಿಕ್ಕಿತ್ತು. ಅದೇ ಸುಳಿವಿನ ಮೇರೆ ತನಿಖೆ ನಡೆಸಿದ ಪೊಲಿಸರಿಗ ಹಂತಕ ಇತಿಹಾಸವೇ ಸಿಕ್ಕಿದೆ.


ಇನ್ನೂ ಕೊಲೆಯಾದ ಲಕ್ಷ್ಮೀಗೆ ಮೂವರು ಮಕ್ಕಳಿದ್ದಾರೆ. ಆದರೆ ಪತಿಯಿಂದ ಲಕ್ಷ್ಮೀ ದೂರವಾಗಿ ಬದುಕು ಸಾಗಿಸಲು ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆ ವೇಳೆ ಹಾವೇರಿ ಜಿಲ್ಲೆಯ ಸುನಿಲ್ ಎನ್ನುವ ಯುವಕನ ಪರಿಚಯವಾಗಿದೆ. ಈ ವೇಳೆ ಇಬ್ಬರು ನಡುವೆ ಪ್ರೀತಿ ಶುರುವಾಗಿದೆ. ಬಳಿಕ ಅನೈತಿಕ ಸಂಬಂಧ ಸಹ ಬೆಳೆದು ಇಬ್ಬರ ನಡುವೆ ಲೈಂಗಿಕ ಸಂಪರ್ಕವೂ ಇತ್ತು‌.

ಸದ್ಯ 30 ವರ್ಷದ ಸುನೀಲ್‌ನ ಮದುವೆ ಮಾಡಲು ಅವರ ಕುಟುಂಬಸ್ಥರು ತಯಾರಿ ನಡೆಸಿದ್ದರು. ಈ ವಿಚಾರ ಗೊತ್ತಾಗಿ ಲಕ್ಷ್ಮೀ 5 ಲಕ್ಷ ರೂ. ಹಣ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಇಲ್ಲವಾದರೆ ನಮ್ಮಿಬ್ಬರ ಅನೈತಿಕ ಸಂಬಂಧದ ವಿಚಾರ ಬಹಿರಂಗ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾಳೆ.


ಲಕ್ಷ್ಮೀಯ ಬ್ಲ್ಯಾಕ್​​ಮೇಲ್​ನಿಂದ ಕಂಗಾಲಾದ, ಸುನೀಲ್ ತನ್ನ ಗೆಳೆಯರಾದ ಸಿದ್ದಪ್ಪ, ನಟರಾಜ್, ರಮೇಶನೊಂದೊಗೆ ಸೇರಿ ಆಕೆಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅದರಂತೆ ಏಪ್ರಿಲ್ 22ರಂದು ಲಕ್ಷ್ಮೀಯನ್ನು ಕಾರಿನಲ್ಲಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಕೇಬಲ್ ವೈಯರಿನಿಂದ ಕುತ್ತಿಗೆಗೆ ಬಿಗಿದು ಕೊಲೆ‌‌‌‌ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಸೂರಣಗಿ ಬಳಿ ಎಸೆದು ಪರಾರಿಯಾಗಿದ್ದರು. ಸದ್ಯ ಪೊಲೀಸರು ಚಾಣಾಕ್ಷಣದಿಂದ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳ ಎಡೆಮುರಿಕಟ್ಟಿದ್ದಾರೆ. ಇನ್ನು ಕಾರು, ಮೊಬೈಲ್, ಕತ್ತು ಹಿಸುಕಲು ಬಳಸಿದ್ದ ಕೇಬಲ್ ವೈರ್​ ಅನ್ನು ವಶಕ್ಕೆ ಪಡೆದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.


ಒಟ್ಟಿನಲ್ಲಿ ಮೂರು ಮಕ್ಕಳ ತಾಯಿ ಮದುವೆಯಾಗದ ಯವಕನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಲ್ಲದೆ ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಲು‌ ಹೋಗಿ ಹೆಣವಾಗಿದ್ದಾಳೆ. ಇನ್ನು ಮದುವೆ ಮಾಡಿಕೊಂಡು ಸುಂದರ ಜೀವನ ನಡೆಸಬೇಕಾದ ಯುವಕ, ಮಹಿಳೆ ಹಿಂದೆ ಬಿದ್ದು ಜೈಲು ಸೇರಿದ್ದಾನೆ. ಅದೇ ರೀತಿ ಸ್ನೇಹಿತನಿಗೆ ಸಹಾಯ ಮಾಡಲೂ ಹೋದ ಮೂವರು ಗೆಳೆಯರು ಸಹ ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ.


Ads on article

Advertise in articles 1

advertising articles 2

Advertise under the article

ಸುರ