ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ


ಮಂಗಳೂರು: ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.

ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿಯಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ದೀಪಕ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


BREAKING NEWS
Loading latest news...
Join our WhatsApp Channel Powered By : Online Pudu