ಪ್ರೀತಿಸಿ ಮದುವೆಯಾದವಳನ್ನು ಚಾಕುವಿನಿಂದ ಇರಿದು ಕೊಂದ ಪಾಪಿ ಪತಿ


ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಕೀರ್ತಿ (26) ಹತ್ಯೆಯಾದ ಮಹಿಳೆ. ಆಕೆಯ ಪತಿ ಅವಿನಾಶ್ (32) ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ.

ಅವಿನಾಶ್ ನಾಲ್ಕು ವರ್ಷಗಳ ಹಿಂದೆ ಕೀರ್ತಿಯ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಇಬ್ಬರು ನಡುವೆ ಶುರುವಾದ ಸಣ್ಣ ಜಗಳದಲ್ಲಿ ಅವಿನಾಶ್ ಪ್ರೀತಿಸಿ ಆತನನ್ನೇ ನಂಬಿ ಬಂದಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡುವಲ್ಲಿಗೆ ಬಂದಿದೆ.


ಕೀರ್ತಿ ಹಾಗೂ ಅವಿನಾಶ್ ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಇಬ್ಬರೂ ಕಳೆದ ವಾರ  ಸಂಬಂಧಿಕರ ಮದುವೆಯಲ್ಲಿ ಸಂತೋಷವಾಗಿಯೇ ಪಾಲ್ಗೊಂಡಿದ್ದರು. ಆದರೆ, ಅದೋನಾಯ್ತೋ ಏನೋ ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಅವಿನಾಶ್​, ಪತ್ನಿ ಕೀರ್ತಿಗೆ ಚಾಕುವಿನಿಂದ ಮನಸ್ಸೋ ಇಚ್ಛೇ ಇರಿದು ಕೊಲೆ ಮಾಡಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೀರ್ತಿ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.


ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಅವಿನಾಶ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಕೊಲೆಯ ಕಾರಣ ಮಾತ್ರ ನಿಗೂಢವಾಗಿದೆ. ಅವಿನಾಶ್​ ಪತ್ತೆಯಾದ ಬಳಿಕವೇ ಹತ್ಯೆಗೆ ನಿಜವಾದ ಕಾರಣ ತಿಳಿಯಬೇಕಿದೆ.


BREAKING NEWS
Loading latest news...
Join our WhatsApp Channel Powered By : Online Pudu