-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾರ್ಕಳ ಪರ್ಪಲೆ ಗಿರಿಯ ಹಸಿರು ಹೊರೆ ಕಾಣಿಕೆಯಲ್ಲಿ ಸಾಗಲಿದೆ ಕಲ್ಲುರ್ಟಿ, ತೂಕತ್ತೇರಿ ದೈವಗಳ ಪಂಚ ಲೋಹದ ವಿಗ್ರಹ

ಕಾರ್ಕಳ ಪರ್ಪಲೆ ಗಿರಿಯ ಹಸಿರು ಹೊರೆ ಕಾಣಿಕೆಯಲ್ಲಿ ಸಾಗಲಿದೆ ಕಲ್ಲುರ್ಟಿ, ತೂಕತ್ತೇರಿ ದೈವಗಳ ಪಂಚ ಲೋಹದ ವಿಗ್ರಹ

 

ಕಾರ್ಕಳ ಪರ್ಪಲೆ ಗಿರಿಯ ಹಸಿರು ಹೊರೆ ಕಾಣಿಕೆ ಮೆರವಣಿಗೆ ಇಂದು ನಡೆಯಲಿದ್ದು, ಈ ವೇಳೆ ಕಲ್ಕುಡ, ಕಲ್ಲುರ್ಟಿ, ತೂಕತ್ತೇರಿ ದೈವಗಳ ಪಂಚ ಲೋಹದ ವಿಗ್ರಹಗಳು ಕೂಡಾ  ಸಾಗಲಿದ್ದು ಕಾರ್ಕಳದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಪರ್ಪಲೆ ಗಿರಿಯತ್ತ ಕೊಂಡೊಯ್ಯಲಾಗುವುದು ಎಂದು ಸಮಿತಿ ತಿಳಿಸಿದೆ.

ಸುಮಾರು 2 ಅಡಿ ಎತ್ತರದ ಪಂಚ ಲೋಹದ ಮೂರ್ತಿಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಮೇ 17 ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಹಸಿರು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಹಸಿರು ಹೊರೆ ತುಂಬಿದ ವಾಹನಗಳು ಪ್ರತಿ ಗ್ರಾಮದಿಂದ ಭಾಗವಹಿಸಲಿವೆ. ಮಾತ್ರವಲ್ಲದೆ ಬೃಹತ್ ವಾಹನ ಜಾಥಾ ದೊಂದಿಗೆ ಈ ಮೆರವಣಿಗೆ ಸಾಗಲಿರುವುದರಿಂದ ಬೈಕು, ರಿಕ್ಷಾ ಕಾರುಗಳೊಂದಿಗೆ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಜಾಥಾದಲ್ಲಿ ಪಾಲ್ಗೊಳ್ಳಬೇಕಾಗಿ ಸಮಿತಿ ಕೋರಿದೆ

Ads on article

Advertise in articles 1

advertising articles 2

Advertise under the article

ಸುರ