-->
ಬೆಳ್ತಂಗಡಿ: ಲೈಂಗಿಕ ದೌರ್ಜನ್ಯದಿಂದ ಅಪ್ರಾಪ್ತೆ ಗರ್ಭಿಣಿ- ಯುವಕನ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಲೈಂಗಿಕ ದೌರ್ಜನ್ಯದಿಂದ ಅಪ್ರಾಪ್ತೆ ಗರ್ಭಿಣಿ- ಯುವಕನ ಮೇಲೆ ಪ್ರಕರಣ ದಾಖಲು


ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿರುವ ಆರೋಪದಲ್ಲಿ ಯುವಕನೋರ್ವನ ಮೇಲೆ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ಸನತ್ (28) ಎಂಬಾತನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ.

ಆರೋಪಿ ಸನತ್ ಕಾರು ಚಾಲಕನಾಗಿ ವೃತ್ತಿ ನಿರ್ವಹಿಸುತ್ತಿದ್ದ. ಈತ ಬಾಲಕಿಯ ತಂದೆಯ ಪರಿಚಿತನಾಗಿದ್ದು, ಅಗಾಗ ಅವರ ಮನೆಗೆ ಬರುತ್ತಿದ್ದ. ಈ ವೇಳೆ ಅಪ್ರಾಪ್ತೆಯೊಂದಿಗೆ ಸಲುಗೆಯಿಂದ ಇದ್ದನೆನ್ನಲಾಗಿದೆ. ಬಾಲಕಿಯ ಜನ್ಮದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಅವರ ಮನೆಯಲ್ಲಿ ಉಳಿದುಕೊಂಡಿದ್ದ. ಈ ಸಂದರ್ಭ ರಾತ್ರಿ ವೇಳೆ ಬಾಲಕಿ ಮಲಗಿದ್ದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ದಿನಗಳಲ್ಲಿ ಕೂಡಾ ಪದೇಪದೇ ರಾತ್ರಿ ವೇಳೆ ಮನೆಗೆ ಬಂದು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ಧ ಬಾಲಕಿ ವೇಣೂರು ಠಾಣೆಯಲ್ಲಿ ದೂರು ನೀಡಿದ್ದಾಳೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 41/2025 ಕಲಂ: 64 BNS-2023 : 4,6 2012ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article