ಮಂಗಳೂರು: ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತ್ಯು ಪ್ರಕರಣ: ಪ್ರೊಫೆಸರೊಂದಿಗಿನ ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಕಾರಣ?
Tuesday, May 20, 2025
ಮಂಗಳೂರು: ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಆಕೆ ತನ್ನ ಪ್ರೊಫೆಸರ್ ಒಂದಿಗಿನ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.
ಧರ್ಮಸ್ಥಳದ ಬೊಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿ ಪುತ್ರಿ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಮಾಡಿಕೊಂಡವರು.
ಆಕಾಂಕ್ಷಾ ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈಕೆಗೆ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿಯ ಪ್ರೊಫೆಸರೊಂದಿಗೆ ಪ್ರೀತಿಯಿತ್ತು. ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂಯೊಂದಿಗೆ ಪ್ರೇಮವಿತ್ತು.
ಶುಕ್ರವಾರ ಆಕೆ ಮ್ಯಾಥ್ಯೂ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಆತ್ಮಹತ್ಯೆಗೆ ಪ್ರೇರಣೆ ಹಿನ್ನಲೆಯಲ್ಲಿ ಮ್ಯಾಥ್ಯೂ ವಿರುದ್ಧ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಬಳಿಕ ಹೆತ್ತವರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಸೋಮವಾರ ಸಂಜೆ ಧರ್ಮಸ್ಥಳದ ಬೊಳಿಯೂರು ಮನೆಯಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ನೆರವೇರಿದೆ.