ಪುತ್ತೂರು: 7ತಿಂಗಳ ಗರ್ಭಿಣಿ ನೇಣಿಗೆ ಶರಣು


ಪುತ್ತೂರು: ಏಳು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಚಿಕ್ಕ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಚಿಕ್ಕ ಪುತ್ತೂರು ನಿವಾಸಿ ಚಿಂತನ್ ಎಂಬವರ ಪತ್ನಿ ರೇಷ್ಮಾ ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಸುರತ್ಕಲ್ ಮೂಲದವರಾಗದ್ದು, ಚಿಂತನ್ ಅವರನ್ನು ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು‌. ಇದೀಗ ಅವರು ಚಿಕ್ಕ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು‌. ಅದೇ ಬಾಡಿಗೆ ಮನೆಯಲ್ಲಿ ಪತಿ ಚಿಂತನ್ ಇಲ್ಲದಿರುವಾಗ ರೇಷ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೇಷ್ಮಾ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದಿಲ್ಲ. ಅವರಿಗೆ ಎರಡು ವರ್ಷದ ಪುತ್ರಿಯಿದ್ದು, ಇದೀಗ ಏಳು ತಿಂಗಳ ಗರ್ಭಿಣಿಯಾಗಿದ್ದಾರೆ.

ಚಿಂತನ್ ಪುತ್ತಿಲ ಪರಿವಾರದ ಮುಖಂಡರಾಗಿದ್ದು, ಇತ್ತೀಚೆಗೆ ಇವರು ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್‌ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.