-->
7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

 

ಸಾಂದರ್ಭಿಕ ಚಿತ್ರ

ದಾವಣಗೆರೆ: ಮನೆಯ ಮುಂಭಾಗ ಆಟವಾಡುತ್ತಿದ್ದ 7 ವರ್ಷದ  ಬಾಲಕಿಯನ್ನು ಇಬ್ಬರು ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.


ಮನೆಯ ಅಕ್ಕಪಕ್ಕದ ಬಾಲಕರು 7 ವರ್ಷದ ಬಾಲಕಿಯ ಪರಿಚಯ ಮಾಡಿಕೊಂಡಿದ್ದರು. ರವಿವಾರ ಸಂಜೆ ಮನೆಯ ಮುಂಭಾಗ ಬಾಲಕಿ ಆಡವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ 15 ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರು ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.


ಆಟವಾಡುತ್ತಿದ್ದ ಮಗಳು ಕಾಣಿಸದ ಹಿನ್ನಲೆ ಬಾಲಕಿಯ ತಾಯಿ ಅಕ್ಕಪಕ್ಕ ಹುಡುಕಿಕೊಂಡು ಹೋಗಿದ್ದಾರೆ. ಮಗಳನ್ನು ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದು ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರು ಬಾಲಕರನ್ನು ಬಂಧಿಸಿದ್ದಾರೆ.

ಪೊಲೀಸರು, ಬಾಲಕರಿಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ

Ads on article

Advertise in articles 1

advertising articles 2

Advertise under the article