ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ನವದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಕೊಚ್ಚಿ ಕೊಲೆಗೈದ ಸ್ಥಿತಿಯಲ್ಲಿ ಪತಿಯ ಮೃತದೇಹ ಪತ್ತೆ, ಪತ್ನಿ ನಾಪತ್ತೆ

ಇಂದೋರ್: ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿ ಮಧ್ಯಪ್ರದೇಶದ ಇಂದೋರ್ ಮೂಲದ ನವದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದ್ದು, ಪತಿಯ ಮೃತದೇಹ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ವಿವಾಹದ ಬಳಿಕ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ರಾಜಾ ರಘುವಂಶಿ ಮತ್ತು ಸೋನಂ ಮೇ 23ರಂದು ಶಿಲ್ಲಾಂಗ್‌ನಲ್ಲಿ ನಾಪತ್ತೆಯಾಗಿದ್ದರು. ಅವರು ನಾಪತ್ತೆಯಾದ ಒಂದು ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು.

ಶಿಲ್ಲಾಂಗ್ ಪೊಲೀಸರು ಕಳೆದ 11ದಿನಗಳಿಂದ ನವದಂಪತಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಪೊಲೀಸರು ರಾಜಾ ರಘುವಂಶಿ ಅವರ ಮೃತದೇಹವನ್ನು ಆಳವಾದ ಕಂದಕದಲ್ಲಿ ಪತ್ತೆ ಹಚ್ಚಿದ್ದಾರೆ. 'ರಾಜಾ ರಘುವಂಶಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳದಲ್ಲಿ ಅವರ ಮೊಬೈಲ್ ಫೋನ್ ದೊರೆತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ನಾವು ರಾಜಾ ಸೂರ್ಯವಂಶಿಯ ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಮಾರಕಾಯುಧವನ್ನು ವಶಪಡಿಸಿಕೊಂಡಿದ್ದೇವೆ. ಇದು ಕೊಲೆ ಕೃತ್ಯ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ರಾಜಾ ಮೃತದೇಹ ಪತ್ತೆಯಾದರೂ ಸೋನಂ ಅವರ ಯಾವುದೇ ಸುಳಿವು ಸಿಕ್ಕಿಲ್ಲ. 6 ಪೊಲೀಸ್ ತಂಡಗಳು ಅವರಿಗಾಗಿ ಹುಡುಕಾಟ ನಡೆಸುತ್ತಿವೆ. ಕಂದಕ ಮತ್ತು ದಟ್ಟವಾದ ಮಂಜಿನಿಂದಾಗಿ ಸ್ಥಳದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu