ಬಿಜೆಪಿ ಮುಖಂಡ ಅರುಣ್ ಪುತ್ತಿಲ ದ.ಕ ಜಿಲ್ಲೆಯಿಂದಲೇ ಗಡಿಪಾರಿಗೆ ನೋಟಿಸ್

 




ಮಂಗಳೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಗಡೀಪಾರು ಆಗುವಂತೆ ಪುತ್ತೂರು ವಿಭಾಗದ ಸಹಾಯಕ ಆಯುಕ್ತ ನೋಟೀಸ್ ಜಾರಿ ಮಾಡಿದ್ದಾರೆ.


ದ.ಕ‌‌.ಜಿಲ್ಲೆಯಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದ್ದು, ತಿಂಗಳ ಅಂತರದಲ್ಲಿ ಮೂರು ಕೊಲೆಗಳು ನಡೆದ ಬೆನ್ನಲ್ಲೇ ಕೋಮು ಭಾವನೆ ಕೆರಳಿಸುವವರ ವಿರುದ್ಧ ಕ್ರಮಗಳು ನಡೆಯುತ್ತಿದೆ.

 ಈ ಹಿನ್ನಲೆಯಲ್ಲಿ ಅರುಣ್ ಪುತ್ತಿಲ ಅವರಿಗೆ ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58 ರಡಿ ನೋಟೀಸ್ ಜಾರಿಯಾಗಿದೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. 


ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಈ ವೇಳೆ ಅವರು ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.



BREAKING NEWS
Loading latest news...
Join our WhatsApp Channel Powered By : Online Pudu