ಭಾರಿ ಮಳೆ: ನಾಳೆ ( ಜು.25 ) ದ.ಕ ಜಿಲ್ಲೆಯ ಶಾಲೆ, ಪಿಯುಗಳಿಗೆ ರಜೆ





ಮಂಗಳೂರು:  ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ,  ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25 ರಂದು  ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ರಜೆಯನ್ನು ಘೋಷಿಸಲಾಗಿದೆ.


 ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು ಮತ್ತು  ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.


BREAKING NEWS
Loading latest news...
Join our WhatsApp Channel Powered By : Online Pudu