ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

 




ಬೆಂಗಳೂರು: ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ ಏಳು ವರ್ಷದ ಬಾಲಕಿಯ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃತ್ಯ ಎಸಗಿದ 20 ವರ್ಷದ ಆರೋಪಿಯನ್ನು ಕೇರಳ ಮೂಲದವನು ಎಂದು ತಿಳಿದು ಬಂದಿದೆ. ಆತ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಅಂಗಡಿಗೆ ಬಾಲಕಿ ಚಿಪ್ಸ್ ಖರೀದಿಸಲು ತೆರಳಿದ್ದಳು. ಈ ವೇಳೆ ಗೋಡೌನ್‌ನಲ್ಲಿ ಚಿಪ್ಸ್ ಕೊಡುವುದಾಗಿ ತಿಳಿಸಿ ಆಕೆಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.

ಸದ್ಯ ಈ ಸಂಬಂಧ ಬಾಲಕಿ ಪೋಷಕರು ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.