ಮಂಗಳೂರಿನಲ್ಲಿ ಗಂಡನ ಸಹಕಾರದಿಂದಲೇ ಮಹಿಳೆಯ ಅತ್ಯಾಚಾರ- ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್!
ಮಂಗಳೂರು: ಗಂಡನ ಸಹಕಾರದಿಂದಲೇ ಮಂಗಳೂರಿನ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ . ಈ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಮಹಿಳೆಯ ಗಂಡ ಮತ್ತು ಕಾನ್ಸ್ಟೇಬಲ್ನನ್ನು ನಗರದ ಕಂಕನಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜುಲೈ 15 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾವೂರು ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಮತ್ತು ಮಹಿಳೆಯ ಪತಿಯನ್ನು ಬಂಧಿಸಿದ್ದಾರೆ.
ತನ್ನ ಪತಿಯು ಹಣಕ್ಕಾಗಿ ಬಲವಂತವಾಗಿ ತನ್ನನ್ನು ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಿಸಿದ್ದಾನೆ. ಮತ್ತು ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ, ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದಾಗಿ ಬೆದರಿಸುತ್ತಿದ್ದಾನೆ ಎಂದು ನಾನು ನನಗೆ ಪರಿಚಯವಿರುವ ಕಾನ್ಸ್ಟೇಬಲ್ಗೆ ತಿಳಿಸಿದ್ದೆ. ಆತ ಮನೆಗೆ ಹೋಗಿ ತನ್ನ ಗಂಡನ ಮೊಬೈಲ್ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಡಿಲೀಟ್ ಮಾಡಿಸಿದ್ದರು. ಆದರೆ, ನಂತರ ಗಂಡನ ದುಷ್ಪ್ರೇರಣೆಯಂತೆ ಕಾನ್ಸ್ಟೇಬಲ್ ಒತ್ತಾಯ ಪೂರ್ವಕವಾಗಿ ತನ್ನ ಇಚ್ಛೆಯ ವಿರುದ್ದ ದೈಹಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ಥೆ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧನ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ