-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಹು ನಿರೀಕ್ಷಿತ “ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ!

ಬಹು ನಿರೀಕ್ಷಿತ “ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ!

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ "ಧರ್ಮ ಚಾವಡಿ" ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. 

ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ "ಧರ್ಮ ದೈವ" ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದು ಅವರ ಎರಡನೇ ಸಿನಿಮಾ "ಧರ್ಮ ಚಾವಡಿ" ಬಿಡುಗಡೆಯಾಗುತ್ತಿದೆ. ತುಳುವರ ಆರಾಧನೆಯಾಗಿರುವ ದೈವಾರಾಧನೆ ಕುರಿತಾದ ಸಿನಿಮಾ ಇದಾಗಿದ್ದು ತುಳುವರು ಮನಪೂರ್ವಕವಾಗಿ ಸಿನಿಮಾ ನೋಡುವ ಮೂಲಕ ಗೆಲ್ಲಿಸಬೇಕು“ ಎಂದರು. 

ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ನಿದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಡಾ ದೇವದಾಸ್ ಕಾಪಿಕಾಡ್, ಪ್ರಕಾಶ್ ಪಾಂಡೇಶ್ವರ್,  ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕ್ಯಾಟ್ಕಾ ಅಧ್ಯಕ್ಷ ಲಂಚುಲಾಲ್ ಕೆ ಎಸ್,ತುಳು ಸಾಹಿತ್ಯ  ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಕ್ಯಾಟ್ಕದ ಮಾಜಿ ಅಧ್ಯಕ್ಷ ಮೋಹನ್ ಕೊಪ್ಪಲ, ನಟ ರೂಪೇಶ್ ಶೆಟ್ಟಿ, ಭಾಸ್ಕರ್ ರೈ ಕುಕ್ಕುವಳ್ಳಿ, ಸ್ವರಾಜ್ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ಎನ್.ಆರ್.ಕೆ. ವಿಶ್ವನಾಥ್, ತಮ್ಮ ಲಕ್ಷ್ಮಣ್, ಚಂದ್ರಹಾಸ್ ಆಳ್ವ, ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ನಟ  ರಮೇಶ್ ರೈ ಕುಕ್ಕುವಳ್ಳಿ ಮತ್ತಿತರರು ಉಪಸ್ಥಿತರಿದ್ದರು. 

ಸಿನಿಮಾಕ್ಕೆ ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.  
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಶೆಟ್ಟಿ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,  ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾ ಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಚಿತ್ರ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಎಲ್ಲಾ ಥಿಯೇಟರ್ ಗಳಲ್ಲಿ ಬಿಡುಗಡೆಗೊಂಡಿದೆ.
ಧರ್ಮಚಾವಡಿ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ,  ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್ ,ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಂಡಿದೆ.

“ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ“ - ನಿತಿನ್ ರೈ ಕುಕ್ಕುವಳ್ಳಿ

ಧರ್ಮಚಾವಡಿ ನನ್ನ ಎರಡನೇ ಸಿನಿಮಾ. ಮುಂಬೈಯಲ್ಲಿ ನಡೆದ ಪ್ರೀಮಿಯರ್ ಶೋವನ್ನು ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ತಿಳಿಸಿದರು.

Ads on article

Advertise in articles 1

advertising articles 2

Advertise under the article

ಸುರ