-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಚಾಂಪಿಯನ್ಸ್

ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಚಾಂಪಿಯನ್ಸ್



 ಮಂಗಳೂರು ವಿವಿ ವೈಯಕ್ತಿಕ ಕ್ರೀಡೆಗಳು ಮತ್ತು  ಗುಂಪು ಆಟಗಳು
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ ೨೧೦ ಕಾಲೇಜುಗಳ ಪೈಕಿ, ವೈಯಕ್ತಿಕ ಕ್ರೀಡೆ ಮತ್ತು  ಗುಂಪು ಆಟಗಳ ೪೨ ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು, ಈ ಶೈಕ್ಷಣಿಕ ವರ್ಷದಲ್ಲಿಯೂ ಪುರುಷರ ಹಾಗೂ ಮಹಿಳೆಯರ  ಎರಡು ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್‌ಷಿಪ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.
ಆಳ್ವಾಸ್ ಕಾಲೇಜು ಸತತ ೨೩ ವರ್ಷಗಳಿಂದ ಈ ಸಾಧನೆಯನ್ನು  ಮೆರೆಯುತ್ತಾ ಬಂದಿದೆ. ಈ ಬಾರಿ ಪುರುಷರ ವಿಭಾಗದಲ್ಲಿ ೩೦೮ ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿಯೂ ೩೦೮ ಅಂಕಗಳನ್ನು ಗಳಿಸಿ ಒಟ್ಟು ೬೧೬ ಅಂಕಗಳೊAದಿಗೆ ಅಗ್ರಸ್ಥಾನವನ್ನು ಪಡೆದಿದೆ.
ಅಥ್ಲೆಟಿಕ್ಸ್, ಕ್ರಾಸ್‌ಕಂಟ್ರಿ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಖೋ-ಖೋ, ವಾಲಿಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಸಾಫ್ಟ್ಬಾಲ್, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಕ್ರಿಕೆಟ್, ಚೆಸ್, ಕರಾಟೆ, ಟೇಬಲ್ ಟೆನ್ನಿಸ್, ನೆಟ್‌ಬಾಲ್, ಹಾಕಿ, ಫುಟ್‌ಬಾಲ್, ಕುಸ್ತಿ, ಟಗ್ ಆಫ್ ವಾರ್ ಸೇರಿದಂತೆ ಅನೇಕ ಕ್ರೀಡಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಮಂಗಳೂರು ವಿವಿ ಅಂಕಗಳನ್ನು ಲೆಕ್ಕ ಹಾಕಿ ಸ್ಥಾನ ನೀಡುತ್ತದೆ. ಈ ಪ್ರಕ್ರಿಯೆಯಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆದಿವೆ.
ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಶ್ಲಾಘಿಸಿದ್ದಾರೆ. 

Ads on article

Advertise in articles 1

advertising articles 2

Advertise under the article