-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಅ 31: ಕಲ್ಲಚ್ಚು ಪ್ರಶಸ್ತಿ ಪ್ರದಾನ

ಅ 31: ಕಲ್ಲಚ್ಚು ಪ್ರಶಸ್ತಿ ಪ್ರದಾನ




ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ " ರಜತ ರಂಗು" ಸಂಭ್ರಮದಲ್ಲಿರುವ " ಕಲ್ಲಚ್ಚು ಪ್ರಕಾಶನದ" 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ  ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ.  ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ ಅಸದ್, ಗೋಕಾವಿ ಗೆಳೆಯರ ಬಳಗ, ರೆಮೊನಾ ಎವೆಟ್ ಪೆರೇರಾ ಮತ್ತು ಡಾ ಪ್ರಕಾಶ ಕೇಶವ ನಾಡಿಗ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಣೆ ಆಗಿದ್ದು ಕಸಾಪದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಸಂತೋಷಕುಮಾರ ಮೆಹಂದಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿರುವರು . ಕವಿ ರಘು ಇಡ್ಕಿದು ಅವರ ಅಭಿನಂದನಾ ಮಾತು  ಹಾಗೂ ಎನ್ ಸುಬ್ರಾಯ ಭಟ್ ಅವರ ನಿರೂಪಣೆ ಇರುವ ಈ ಸಮಾರಂಭಕ್ಕೆ ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಮುಖ್ಯಸ್ಥ ಮಹೇಶ ಆರ್ ನಾಯಕ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article