-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಎಸ್ ವಿ ಟಿ  : ಆಟಿಡೊಂಜಿ ದಿನ  ವಿಶೇಷ ಕಾರ್ಯಕ್ರಮ

ಎಸ್ ವಿ ಟಿ : ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ




ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

          ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ರೇಷ್ಮಾ ಶೆಟ್ಟಿ ಗೋರೂರು ಆಟಿ ತಿಂಗಳ ಮಹತ್ವ ಮತ್ತು ವಿಶೇಷ ಸಂಪ್ರದಾಯಿಕ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. 

            ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸುವ ಸುಮಾರು 33 ಬಗೆಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. 

           


 ಈ ಸಂದರ್ಭದಲ್ಲಿ ಗುಂಡ ಕಟ್ಟುವ, ಹೂ ಕಟ್ಟುವ , ಚೇಟ್ಲಾ , ಲಗೋರಿ , ಹಗ್ಗ ಜಗ್ಗಾಟ,  ಮೂರು ಕಾಲಿನ ಓಟ,  ಲಿಂಬು ಚಮಚ ಓಟ ಸೇರಿದಂತೆ ವಿವಿಧ ಬಗೆಯ ಆಟಗಳ ಸ್ಪರ್ಧಿಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. 

              ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಸುಮಂಗಲ ಪ್ರಭು, ಪ್ರಭಾತ್ ರಂಜನ್, ದೇವದಾಸ್ ಕೆರೆಮನೆ, ಸುನಿಲ್ ಎಸ್ ಶೆಟ್ಟಿ, ಪಧ್ಮಪ್ರಭ ಇಂದ್ರ , ಪ್ರಭಾ ಜಿ ಭೋವಿ, ಪ್ರಿಯಾ ಪ್ರಭು, ಪ್ರಭಾವತಿ ಹೆಗ್ಡೆ , ಮಹಾಲಕ್ಷ್ಮಿ ಶೆಣೈ, ಹರೀಶ್ ಕೆ ಉಪಸ್ಥಿತರಿದ್ದರು.


          ಹಿಂದಿ ಉಪನ್ಯಾಸಕರಾದ ಸರಸ್ವತಿ ನಿರೂಪಿಸಿದರು. ಇತಿಹಾಸ ಉಪನ್ಯಾಸಕರಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ  ರಶ್ಮಿತಾ ವಂದಿಸಿದರು.

Ads on article

Advertise in articles 1

advertising articles 2

Advertise under the article

ಸುರ